Thursday 11 March 2021

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃

🍂 *ದಿನಕ್ಕೊಂದು ಸಿ(ಕ)ಹಿ ಮಾತು* 🍃


ಅನ್ಯೋನ್ಯ ದಾಂಪತ್ಯ ಎಂದರೆ ಅದು ಶಿವ–ಪಾರ್ವತಿಯರ ದಾಂಪತ್ಯವೇ ಹೌದು. ಶಿವನು ತನ್ನ ಶರೀರದ ಅರ್ಧಭಾಗವನ್ನೇ ತನ್ನ ಮಡದಿಗೆ ಮೀಸಲಾಗಿರಿಸಿ ಅರ್ಧನಾರೀಶ್ವರನಾದವನು; ದಾಂಪತ್ಯ ಎಂದರೆ ಗಂಡು ಹೆಚ್ಚು, ಹೆಣ್ಣು ಕಡಿಮೆ ಎಂದೋ ಅಥವಾ ಹೆಣ್ಣು ಹೆಚ್ಚು, ಗಂಡು ಕಡಿಮೆ ಎಂದೋ ಲೆಕ್ಕಾಚಾರದ ವ್ಯವಹಾರ ಅಲ್ಲ, ಅದು ಇಬ್ಬರ ಸಮಪಾಲಿನ ಸಮಬಾಳು ಎಂಬುದನ್ನು ಅರ್ಧನಾರೀಶ್ವರನ ಕಲ್ಪನೆಯಲ್ಲಿ ಕಾಣಬಹುದು.

ಶಿವನಿಗೆ ತನ್ನ ಮಡದಿಗೆ ಅರ್ಧಶರೀರವನ್ನೇ ಕೊಡುವಷ್ಟು ಪ್ರೀತಿ ಇದೆ ನಿಜ; ಹೀಗಿದ್ದರೂ ಅವನು ಪರಮವೈರಾಗ್ಯಸ್ವರೂಪಿ. ಅವನು ಕೇವಲ ಭೋಗದಲ್ಲಿಯೇ ಮುಳುಗುವವನೂ ಅಲ್ಲ ಅಥವಾ ಕೇವಲ ತ್ಯಾಗದಲ್ಲಿಯೇ ತಲ್ಲಿನನಾಗುವವನೂ ಅಲ್ಲ; ತ್ಯಾಗಭೋಗದ ಸಮನ್ವಯದ ಸಂಕೇತವೇ ಅವನು.


ಹೀಗೆ ವಿಶಿಷ್ಟ ದೇವತೆಯಾದ ಶಿವನ ಆರಾಧನೆಗೆಂದೇ ಮೀಸಲಾದ ದಿನವೇ ಶಿವರಾತ್ರಿ.


*ತಮಗೆಲ್ಲರಿಗೂ ಮಹಾಶಿವರಾತ್ರಿಯ ಹಾರ್ದಿಕ ಶುಭಾಶಯಗಳು*🙏🏻😊💐

1 comment:

 ಎಲ್ಲರಿಗೂ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು