Monday, 15 April 2019

🍂 *ದಿನಕ್ಕೊಂದು ಸಿ(ಕ)ಹಿ ಮಾತು*🍃


ಅಷ್ಟದಿಗ್ಗಜವೆ ನೀನ್? ಆದಿಶೇಷನೆ ನೀನು?।
ಕಷ್ಟಭಾರವಿದೆಂದು ನಿಟ್ಟುಸಿರ ಬಿಡುವೆ! ॥
ನಿಷ್ಠುರದ ನಿನ್ನ ಕನಿಕರ ಜಗಕೆ ಬೇಕಿಲ್ಲ।
ಎಷ್ಟಾದರಷ್ಟೆ ಸರಿ  - ಮಂಕುತಿಮ್ಮ ॥


ಬದುಕಿನ ಬವಣೆಯನ್ನು ಪಡುವಾಗ " ಅಯ್ಯೋ ಇದು ಕಷ್ಟ ಮತ್ತು ಇದು ಭಾರ" ಎಂದು ನಿಟ್ಟುಸಿರು ಬಿಡುವೆಯಲ್ಲಾ, ನೀನೇನು ಎಂಟು ದಿಕ್ಕುಗಳನ್ನು ಹೊತ್ತ ಆನೆಗಳಷ್ಟು ಭಾರವನ್ನೂ ಹೊತ್ತಿಲ್ಲ ಅಥವಾ ಆ ಆನೆಗಳನ್ನು ಹೊತ್ತ ಆದಿಶೇಷನಷ್ಟು ಭಾರವನ್ನೂ ಹೊತ್ತಿಲ್ಲವಲ್ಲ. ಸುಮ್ಮನೆ " ನಾನು ಬಹಳ ಕಷ್ಟಪಡುತ್ತಿದ್ದೇನೆ " ಎನ್ನುತ್ತಾ ಅನ್ಯರ ಅನುಕಂಪವನ್ನು ಆಕರ್ಷಿಸುವ ನಿನ್ನನ್ನು ಯಾರೂ ಈ ಜಗತ್ತಿನಲ್ಲಿ ಗಮನಿಸುವುದಿಲ್ಲ. ನಿನಗೆ ಎಷ್ಟು ಹೊರಲಾದರೆ ಅಷ್ಟು ಹೊತ್ತುಕೋ.

-ಡಿ.ವಿ.ಜಿ

No comments:

Post a Comment

 ನಾವು ಸುಮ್ಮನಿದ್ದರೂ ಜನ ಸುಮ್ಮನೆ ಇಲ್ಲ ಎಂದರೆ, ನಾವು ಬೆಳೆಯುತ್ತಿದ್ದೇವೆ ಎಂದು ಅರ್ಥ